ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು, ಇಂದು ನ್ಯಾಯಾಲಯಕ್ಕೆ ಶ್ರೀಕಿ ಸೇರಿದಂತೆ 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಆರೋಪಿಗಳಾದಂತ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಸೇರಿದಂತೆ 6 ಆರೋಪಿಗಳ ವಿರುದ್ಧ ಇಂದು ಕೋರ್ಟ್ ಗೆ ದೋಷಾರೋಪ ಪಟ್ಟಿಯನ್ನು ಎಸ್ಐಟಿ ಪೊಲೀಸರು ಸಲ್ಲಿಸಿದ್ದಾರೆ.
ಅಂದಹಾಗೇ ಡ್ರಗ್ ಕೇಸ್ ಪ್ರಕರಣ ಸಂಬಂಧ ಮೂರು ಎಫ್ಐಆರ್ ಗಳು ದಾಖಲಾಗಿದ್ದವು. ಇವುಗಳನ್ನು ತನಿಖೆ ಮಾಡುತ್ತಿದ್ದಂತ ವೇಳೆಯಲ್ಲಿ ಬಿಟ್ ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕೇಸರನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆಗೆ ಆದೇಶಿಸಿತ್ತು. ಈಗ ತನಿಖೆ ನಡೆಸಿರುವಂತ ಎಸ್ಐಟಿ ಪೊಲೀಸರು, ನ್ಯಾಯಾಲಯಕ್ಕೆ 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಉತ್ತರಾಖಂಡ ಹಿಮಪಾತ: ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!