ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಏರ್ ಪೋರ್ಟ್ ನಲ್ಲೇ ತಡರಾತ್ರಿ ಬಂಧಿಸಿತ್ತು.
ಬಂಧನಕ್ಕೆ ಒಳಗಾಗಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ನೀಡಿತ್ತು. ಇಂದಿಗೆ ಅವರ ಎಸ್ಐಟಿ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು.
ಈ ಹಿನ್ನಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
BIG UPDATE: ಇನ್ನೂ ‘ಸಚಿವ ಸ್ಥಾನ’ಕ್ಕೆ ನಾನು ‘ರಾಜೀನಾಮೆ’ ನೀಡಿಲ್ಲ: ‘ಬಿ.ನಾಗೇಂದ್ರ’ ಸ್ಪಷ್ಟನೆ | B Nagendra
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!