ಶಿವಮೊಗ್ಗ: ಹೊಳಲೂರು ಶಾಖಾ ವ್ಯಾಪ್ತಿಯಲ್ಲಿ 66/11 ಕೆವಿ ವಿ.ವಿ ಕೇಂದ್ರದಲ್ಲಿ ಎಫ್-7,8 ಮತ್ತು 10 ಮಾರ್ಗಗಳಲ್ಲಿ ಲಿಂಕ್‍ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಐಇಆರ್ಟಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂನ್ 14 ರೊಳಗಾಗಿ ಸಲ್ಲಿಸುವಂತೆ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!