ಬೆಂಗಳೂರು: ಬಿಜೆಪಿ ವಿರುದ್ಧದ ಅಪಪ್ರಚಾರದ ಜಾಹೀರಾತು ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಂಗಳೂರಿನ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಲಿದ್ದಾರೆ.
ಜೂನ್.1ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಸರ್ಕಾರದ ವಿರುದ್ಧ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದ ಆರೋಪ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿತ್ತು. ಆದ್ರೇ ಜೂನ್.7ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು.
ಈ ಹಿನ್ನಲೆಯಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ನಂತರ 11.30 ಕ್ಕೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿರುವರು.
ಓದುಗರೇ ಗಮನಿಸಿ: ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಇದೇ ಕೊನೆ ದಿನ….!
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ