ಬೆಂಗಳೂರು : ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿ ರೀತಿಯಲ್ಲಿ ತೋರಿಸಿದ್ದಕ್ಕಾಗಿ ರಾಜ್ಯದಲ್ಲಿ ಬಾಲಿವುಡ್ ಸಿನಿಮಾ ‘ಹಮ್ ದೊ ಹಮಾರಾ ಬಾರಾ’ ಪ್ರದರ್ಶನಕ್ಕೆ ನಿಷೇಧಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ ಅಡಿ ಸರ್ಕಾರದಿಂದ ಈ ಒಂದು ಚಿತ್ರ ಪ್ರದರ್ಶನಕ್ಕೆ ನಿಷೇಧಿಸಲಾಗಿದೆ. ಸಿನಿಮಾದಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿನಿಮಾ ವಿರುದ್ಧ ಮುಸ್ಲಿಂ ಸಂಘಟನೆಗಳು ಆರೋಪ ಮಾಡಿದ್ದವು.ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ವಿವಾದಾತ್ಮಕ ಸಿನಿಮಾಗೆ ಇದೀಗ ರಾಜ್ಯ ಸರ್ಕಾರ ನಿಷೇಧಿಸಿದೆ.