ನವದೆಹಲಿ: ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಬಿಜೆಪಿಯ ನರೇಂದ್ರ ಮೋದಿ ಅವರ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪ್ರಸ್ತಾಪಿಸಿದ ನಂತರ, ಮೂರನೇ ಬಾರಿಗೆ ಪ್ರಧಾನಿಯಾಗಲು ಸಜ್ಜಾಗಿರುವ ನರೇಂದ್ರ ಮೋದಿ ಅವರು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದರು.
ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿ ಹಕ್ಕು ಮಂಡಿಸುವ ಮೊದಲು ಈ ಭೇಟಿ ಮಾಡಿದರು. ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾನಿ ಪಾದಗಳಿಗೆ ನಮಸ್ಕರಿಸಿದಂತ ಮೋದಿ, ಅವರ ಆಶೀರ್ವಾದವನ್ನು ಪಡೆದರು.
ನಂತರ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. 543 ಸದಸ್ಯರ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದರೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 293 ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಬಹುಮತವನ್ನು ಹೊಂದಿದೆ.
ನಾಳೆ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲು ‘CWC ಸಭೆ’ ಕರೆದ ಮಲ್ಲಿಕಾರ್ಜುನ ಖರ್ಗೆ