ದಾವಣಗೆರೆ : ಪೊಲೀಸರು ಎಷ್ಟೇ ಕಠಿಣವಾದಂತ ನಿಯಮ ಜಾರಿಗೊಳಿಸಿದರು, ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಕೂಡ ನೈತಿಕ ಪೊಲೀಸ್ ಸಿಗಿರಿ ಪ್ರಕರಣಗಳು ನಿಲ್ಲುತ್ತಿಲ್ಲ. ಇದೀಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಂಕಿ ನಗರದಲ್ಲಿ ಯುವಕನೊಬ್ಬನನ್ನು ಐದಾರು ಜನ ರೂಮ್ನಲ್ಲಿ ಕೂಡಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೌದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್ನಲ್ಲಿ ಕೂಡಿಹಾಕಿ ಹಲ್ಲೆ ನಡೆಸಿರುವ ಆರೋಪ ಇದೀಗ ಕೇಳಿಬಂದಿದೆ. ಯುವಕನನ್ನು ಕೂಡಿಹಾಕಿ ಐದಾರು ಜನರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹರಿಹರದ ಬೆಂಕಿ ನಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.ಘಟನೆ ಕುರಿತಂತೆ ಅಲ್ಲಿಗೆ ಒಳಗಾದ ಯುವಕ ಯಾವುದೇ ದೂರನ್ನು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ.