ಬೆಂಗಳೂರು : ಮುಂಗಾರು ಮಳೆ ಆಗಮಿಸುತ್ತಿದ್ದಂತೆ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಆರಂಭವಾಗಿದೆ. ಈಗಾಗಲೇ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮುಡಿದು ಇಂದು ಕೂಡ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದ ರಸ್ತೆಯಲ್ಲಿ ಸೆಂಚುರಿಸಲು ವಾಹನ ಸವಾರರು ಪರದಾಟ ನಡೆಸಿದರು.
ಹೌದು ಇಂದು ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಯಾಗಿದೆ. ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ವೃತ್ತ, ವಿಧಾನಸೌಧ, ರಾಜಭವನ, ಮೆಜೆಸ್ಟಿಕ್, ಶ್ರೀರಾಮಪುರ, ಮಲ್ಲೇಶ್ವರಂ, ರಾಜಾಜಿನಗರ, ಮಾಗಡಿ ರಸ್ತೆ ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ.ಮಳೆಯಿಂದಾಗಿ ಸಂಚಾರದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿರುವ ದೃಶ್ಯ ಕಂಡು ಬಂದಿತು.
ಇವತ್ತಿನಿಂದ 10 ನೇ ತಾರೀಖಿನವರೆಗೂ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೊತೆಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಚ್ಚರವಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.