ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2024-24ನೇ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಇಂದಿನಿಂದ ಮಕ್ಕಳದ ದಾಖಲಾತಿ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗಿದ್ದು, ಜೂನ್.19 ದಾಖಲಾತಿಗೆ ಕೊನೆಯ ದಿನವಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಆರ್.ಟಿಇ ಅಡಿಯಡಿ ಮಕ್ಕಳನ್ನು ಶಾಲೆಗಳಲ್ಲಿ ದಾಖಲಿಸಿಕೊಳ್ಳೋದಕ್ಕೆ ಜೂನ್.8ರ ಇಂದಿನಿಂದ ಆರಂಭಗೊಳ್ಳಲಿದೆ. ಜೂನ್.19 ಶಾಲಾ ದಾಖಲಾತಿಗೆ ಕೊನೆಯ ದಿನವಾಗಿದೆ ಅಂತ ತಿಳಿಸಿದೆ.
ಶನಿವಾರದ ನಿನ್ನೆ ಮೊದಲ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಇಂದಿನಿಂದ ಶಾಲೆಗಳಲ್ಲಿ ದಾಖಲಾಗೋದಕ್ಕೆ ಮಕ್ಕಳ ವಿವರವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.schooleducation.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಜೂನ್.25ರಂದು RTE ಅಡಿಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಲಾಟರಿ ಮೂಲಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.
ಇನ್ನೂ ಜೂನ್.26ರಿಂದ ಜುಲೈ.2ರವರೆಗೆ 2ನೇ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ 2ನೇ ಸುತ್ತಿನಲ್ಲಿ ಪ್ರಕಟವಾದಂತ ಸೀಟುಗಳ ವಿದ್ಯಾರ್ಥಿಗಳು ಶಾಲೆಗಳಿಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.