ನವದೆಹಲಿ: 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್.9ರಂದು ಸಂಜೆ 7.30ಕ್ಕೆ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಬಗ್ಗೆ ರಾಷ್ಟ್ರಪತಿ ಭವನದ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ. ಜೂನ್.9ರಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಂತ ತಿಳಿಸಿದೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ಪೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಅಂತ ಹೇಳಿದೆ.
ಜು.13ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’: ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ