ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಮುಸ್ಲಿಂ ಸಮುದಾಯಗಳ ಕುರಿತಂತೆ ಅವಹೇಳನಾಕಾರಿ ಪೋಸ್ಟ್ ಅನ್ನು ಬಿಜೆಪಿಯ ಎಕ್ಸ್ ಕಾರ್ಪ್ ಖಾತೆಯಲ್ಲಿ ಹಂಚಿಕೊಂಡ ಆರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಸಾಮಾಜಿಕ ಜಾಲತಾಣಗಳ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋಟ್ ನೋಟಿಸ್ ಜಾರಿ ಮಾಡಿದೆ.
ಹೌದು ಏಪ್ರಿಲ್ 4 ರಂದು ಬಿಜೆಪಿ ಕರ್ನಾಟಕದ ಸಾಮಾಜಿಕ ತಾಣ ಎಕ್ಸ್ ಜಾಲತಾಣದಲ್ಲಿ ಅನಿಮೇಷನ್ ಮಾದರಿಯ ವಿಡಿಯೋವೊಂದನ್ನು ಪೋಸ್ಟ್ ಆಗಿತ್ತು. ಅದರಲ್ಲಿ ಶಿರೋನಾಮೆಯನ್ನು ಎಚ್ಚರ.. ಎಚ್ಚರ.. ಎಚ್ಚರ ಎಂದು ಬರೆದಿದ್ದು, ಅದರಲ್ಲಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೂರು ಮೊಟ್ಟೆಗಳಿಂದ ಮರಿಗಳು ಹೊರ ಬರುತ್ತಿರುವಂತೆ ಗುರುತಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿದ್ದರಾಯ್ಯ ಮತ್ತೊಂದು ಧರ್ಮದ ಮೊಟ್ಟೆಯೊಂದನ್ನು ತಂದಿಟ್ಟು ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಿದ್ದ ಆಹಾರವನ್ನು ನೀಡುತ್ತಿರುವಂತೆ ಬಿಂಬಿಸಲಾಗಿತ್ತು.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.