ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ 50ಕ್ಕೂ ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.