ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಮುಂದಿನ ಗುರುವಾರ ನಡೆಯಲಿದೆ. ಚುನಾವಣೆ ಬಳಿಕ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದಿದ್ದು, ವಿಶೇಷವಾಗಿ ಗ್ಯಾರಂಟಿ ಯೋಜನೆ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.