ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಹತ್ಯೆಯಾಗಿದ್ದು, ಚಿಟ್ ಫಂಡ್ ಉದ್ಯೋಗಿಯನ್ನು ತುಂಡು ತುಂಡಾಗಿ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಚಿಟ್ ಫಂಡ್ ಉದ್ಯೋಗಿಯನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಿದ್ದಾರೆ.ಮೂರು ದಿನಗಳಿಂದ ಹುಡುಕಾಟ ನಡೆಸಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಕೊಲೆಯಾದ ದುರ್ದೈವಿ ಕೆವಿ ಶ್ರೀಕಾಂತ್ (34) ಎಂಬುದು ತಿಳಿದುಬಂದಿದೆ.
ಶ್ರೀಕಾಂತ್ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚೀಟ್ ಫಂಡ್ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದು, ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ.
ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಕೊಲೆ ಮಾಡಿದ ಸ್ಥಳ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿನಗರ ಪೊಲೀಸರಿಂದ ಕೊಲೆ (302) ಮತ್ತು ಸಾಕ್ಷಿ ನಾಶ (201)ರಡಿ ಕೇಸ್ ದಾಖಲಾಗಿದೆ.