ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರು ವಾಲ್ಮೀಕಿ ಹಗರಣದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿ ಇಲ್ಲ ಎಂದು ಸ್ಫೋಟಕವಾದಂತ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ವಾಲ್ಮೀಕಿ ಹಗರಣದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿಪಡಬೇಕಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ಸರ್ಕಾರಕ್ಕೆ ಉರುಳಾಗುತ್ತದೆ.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಏಕೆಂದರೆ ಮುಖ್ಯಮಂತ್ರಿ ಅವರ ಮೂಗಿನ ನೇರದಲ್ಲಿಯೇ ಈ ಒಂದು ಹಗರಣ ನಡೆದಿದೆ. ಹಣಕಾಸು ಖಾತೆ ಅವರ ಬಳಿಯೇ ಇರುವುದರಿಂದ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಈಗಾಗಲೇ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ನೈತಿಕ ಹೊಣೆ ಮತ್ತು ಸೇವಿಸಿದರಾಮಯ್ಯ ಕೂಡ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.