ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿಯೋನಿಕ್ಸ್ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆದಂತ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಿದೆ.
ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್ 14ರ ಒಳಗೆ ಇ-ಮೇಲ್ kea2023exam@gmail.com ಸಲ್ಲಿಸಬಹುದಾಗಿದೆ.
BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ತೆಲಂಗಾಣ ಸಿಎಂ ರೇವಂತ ರೆಡ್ಡಿಗೆ ‘ಕನ್ನಡಿಗರ ಪತ್ರ’