ಬೆಂಗಳೂರು: ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ ಡಿ ಎಂ ಸಿಯಿಂದ ಅತಿಥಿ ಶಿಕ್ಷಕರ ನೇಮಕವನ್ನು ಜೂನ್.16ರೊಳೆಗೆ ನಿಯೋಜನಿಸಿಕೊಳ್ಳುವಂತೆ ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿ, ಸೂಚಿಸಿದ್ದಾರೆ.
ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್‌ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆಗಳಿಗೆ ಖಾಯಂ ಶಿಕ್ಷಕ, ಉಪನ್ಯಾಸಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನೇಮಕವಾಗುವವರೆಗೆ ಅಥವಾ 2024-25ನೇ ಶೈಕ್ಷಣಿಕ ಸಾಲಿಗೆ ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಲ್ಲಿರುವ ಎಸ್‌ಡಿಎಂಸಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಜಿಯೋ ಏರ್ ಫೈಬರ್‌ನ ಮಿಂಚಿನ ವೇಗದ ರಹಸ್ಯ ಅದರ ಸ್ವತಂತ್ರ 5ಜಿ ತಂತ್ರಜ್ಞಾನ: ಓಪನ್ ಸಿಗ್ನಲ್
KEAಯಿಂದ ವಿವಿಧ ನಿಗಮಗಳಲ್ಲಿನ ಹುದ್ದೆಗಳ ಭರ್ತಿಗೆ ನಡೆದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಪಟ್ಟಿ ಪ್ರಕಟ