ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದೆ ಹೋಗಿದ್ದರಿಂದ ಇದೀಗ ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.ಇನ್ನೂ ಈ ವಿಚಾರದ ಕುರಿತಾಗಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ ಗ್ಯಾರಂಟಿ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದು ತಿಳಿಸಿದರು.
ಬಡವರು ಕಾರ್ಮಿಕರು ಕೃಷಿ, ಕೆಲಸ ಮತ್ತು ಕೂಲಿ, ಕೆಲಸ ಮಾಡುವವರು ಗ್ರಾಮಾಂತರ ಭಾಗದ ಜನರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆಂತಲೂ ಗ್ಯಾರಂಟಿ ಜಾರಿ ಮಾಡಲಾಗಿದೆ.ಈ ಹಿಂದೆಯೂ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡಿದ್ರು. ಈ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ.
ಪ್ರಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ನನ್ನನ್ನೇ ನೇಮಕ ಮಾಡಿದ್ದರು.ಆರ್ಥಿಕ ಸಮಸ್ಯೆ ಆಗಬಾರದೆಂದು ನಾವು ಲೆಕ್ಕಾಚಾರ ಮಾಡಿದ್ದೆವು. ನಿಭಾಯಿಸಬಹುದು ಎಂದು ಗ್ಯಾರೆಂಟಿ ಯೋಜನೆ ಜಾರಿಗೆ ಮಾಡಿದ್ದೆವು.ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ವಾದಂತಿದೆ ಲೋಕಸಭೆ ಚುನಾವಣೆಯ ಬಳಿಕ ಬಿಜೆಪಿಯವರು ಈ ಕುರಿತಂತೆ ಸುದ್ದಿ ಹಬ್ಬಿಸಿದ್ದರು.
ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲವೆಂದು ನಾವು ಸ್ಪಷ್ಟಪಡಿಸಿದ್ದೇವೆ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸೀಟ್ ಬಂದಿದೆ ಎಂದು ಗ್ಯಾರೆಂಟಿ ನಿಲ್ಲಿಸಲ್ಲ ಕಾಂಗ್ರೆಸ್ ಗೆ ಕಡಿಮೆ ಸ್ಥಾನ ಬಂದಿದೆ ಎಂದು ಗ್ಯಾರಂಟಿ ನಿಲ್ಲಿಸುವುದಿಲ್ಲ ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ತಿಳಿಸಿದರು.