ಬೆಂಗಳೂರು : ಬೆಂಗಳೂರಿನಲ್ಲಿ ಕುದುರೆ ರೇಸ್ ನಡೆಸಲು ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ ಸಲ್ಲಿಸಿದ್ದ ಮನವಿ ತಿರಸ್ಕರಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ರೇಸ್ ಕೋರ್ಸ್ ಹೈಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿದುಬಂದಿದೆ.
ಹೌದು ಬಿಟಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಬಿಟಿಸಿ ಅರ್ಜಿಯ ವಿಚಾರಣೆ ನಡೆಸಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಜೂ.12ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಸಕ್ಷಮ ಪ್ರಾಧಿಕಾರ ಕ್ಲಬ್ ಹಾಗೂ ಬುಕ್ಕಿಗಳ ಅಕ್ರಮಗಳ ಬಗ್ಗೆ ಸಿಸಿಬಿ ತನಿಖೆ ಬಾಕಿ ಇದೆ ಎಂದೂ ಸಹ ಹೇಳಿದೆ. ಆದರೆ ಸಕ್ಷಮ ಪ್ರಾಧಿಕಾರ ಅರ್ಜಿ ತಿರಸ್ಕಾರಕ್ಕೆ ನೀಡಿರುವ ಕಾರಣಗಳು ಸರಿಯಲ್ಲ, ಅದಕ್ಕೂ ರೇಸ್ಗೂ ಸಂಬಂಧವಿಲ್ಲ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕುದುರೆ ರೇಸ್ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಈ ವೇಳೆ ಅರ್ಜಿದಾರರ ಪರ ವಕೀಲರು, ಮೊದಲು ಬೆಂಗಳೂರು ಟರ್ಫ್ ಕ್ಲಬ್ನಲ್ಲಿರೇಸ್ ಚಟುವಟಿಕೆ ನಡೆಸಲು ಷರತ್ತುಬದ್ಧ ಅನುಮತಿ ನೀಡುವ ಸಂಬಂಧ ಸರ್ಕಾರ ಜೂ. 6ರೊಳಗೆ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಕಳೆದ ಮೇ 23ರಂದು ನಿರ್ದೇಶನ ನೀಡಿತ್ತು. ಅದರಂತೆ ಬಿಟಿಸಿ ಸಲ್ಲಿಸಿದ್ದ ಅರ್ಜಿಯನ್ನು ಸಕ್ಷಮ ಪ್ರಾಧಿಕಾರ ತಿರಸ್ಕರಿಸಿದೆ ಎಂದರು.