ನವದೆಹಲಿ : ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಇಂದು ನಡೆದಂತ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಂಸದೀಯ ಅಧ್ಯಕ್ಷರಾದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿಯವರು ಇದೊಂದು ಭಾವನಾತ್ಮಕ ಕ್ಷಣವಾಗಿದೆ ಎಂದು ತಿಳಿಸಿದರು.
ಹೌದು ಇಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು.ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಇತರೆ ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು. ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.