ಕಲಬುರ್ಗಿ : ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕಲ್ಬುರ್ಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಕುರಿತಂತೆ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ ರೆಡ್ ಅಲರ್ಟ್ ಘೋಷಿಸಿ ಅದೇಶಿಸಿದ್ದಾರೆ.
ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಧಿಕಾರಿ ಅದೆಸಿದ್ದಾರೆ. ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ ರೆಡ್ ಅಲರ್ಟ್ ಘೋಷಿಸಿದ್ದಾರೆ.