ನವದೆಹಲಿ: ಪತಿಯ ಸಂಬಂಧಿಕರು ಮತ್ತು ಸ್ನೇಹಿತರಿಗೆ ಪತ್ನಿ ಚಹಾ ನೀಡಲಿಲ್ಲ ಅಥವಾ ಸಣ್ಣ ವಿಷಯಗಳಿಗೆ ಜಗಳವಾಡುತ್ತಿದ್ದಳು ಎಂಬ ಕಾರಣಕ್ಕೆ ಅದನ್ನು ಕ್ರೌರ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವಾಗ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಇಂತಹ ಸಾಮಾನ್ಯ ಮತ್ತು ಅಸ್ಪಷ್ಟ ಆರೋಪಗಳಿಗೆ ಯಾವುದೇ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ. ಮೇಲ್ಮನವಿದಾರರು ಎತ್ತಿರುವ ಆರೋಪಗಳು ವೈವಾಹಿಕ ಜೀವನದ ಸಾಮಾನ್ಯ ಸವೆತವಾಗಿದೆ” ಎಂದು ನ್ಯಾಯಮೂರ್ತಿ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಹರ್ಷ್ ಬಂಗರ್ ಹೇಳಿದರು.