ಹುಬ್ಬಳ್ಳಿ : ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು 2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಶುರಾಮ್ ದಾವಣಗೆರೆ ಅವರಿಗೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆ ಹಿನ್ನೆಲೆ?
ಕಳೆದ 2023 ಡಿಸೆಂಬರ್ 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು.ಈ ವೇಳೆ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಕುರಿತಂತೆ ಪರಶುರಾಮ್ ದಾವಣಗೆರೆ ಎಂಬುವವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಳ್ಳುವಂತೆ ಮೇಯರ್ ಉಪಮೇಯರ್ ಸತೀಶ್ ಹಾನಗಲ್ ಹಾಗೂ ಶಾಸಕ ಅರವಿಂದ್ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಎಂಬುವವರು ಪರಶುರಾಮ್ ದಾವಣಗೆರೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ.ಈ ಹಿನ್ನಲೆ ಪರಶುರಾಮ್ 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪರಶುರಾಮ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚನೆ ನೀಡಿದೆ.