ಮಹಾರಾಷ್ಟ್ರ : 3ನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯಲು ನರೇಂದ್ರ ಮೋದಿ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7:00 15 ನಿಮಿಷಕ್ಕೆ ಮೋದಿಯವರು ಪ್ರಧಾನಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದರ ಮಧ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಭೀ ನಡೆಯುತ್ತಿದ್ದು ಈ ಬಾರಿ ಬಿಜೆಪಿ ಅಜಿತ್ ಪವಾರ್ ಬಣದ ಎನ್ ಸಿಪಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿಲ್ಲ.
ಅಜಿತ್ ಪವಾರ್ ಬಣ್ಣದ ಎನ್ ಸಿ ಪಿ ಗೆ ಸಚಿವ ಸ್ಥಾನ ನೀಡದ ವಿಚಾರವಾಗಿ ಎನ್‌ಸಿಪಿ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿಕೆಯನ್ನು ನೀಡಿದ್ದು, ರಾಜ್ಯ ದರ್ಜೆಯ ಸಚಿವ ಸ್ಥಾನ ನೀಡುವುದಾಗಿ ನೆನ್ನೆ ರಾತ್ರಿ ಹೇಳಿದ್ದರು. ನಾನು ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ ಅದರಿಂದ ಇದು ನನಗೆ ಹಿನ್ನಡೆಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ನಾವು ಕೇಳಿದ್ದೇವೆ ಕೆಲದಿನ ಕಾಯುವಂತೆ ಬಿಜೆಪಿ ಹೈಕಮಾಂಡ್ ಹೇಳಿದೆ. ಬಿಜೆಪಿ ನಾಯಕರು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಎಂಸಿಪಿ ಹಿರಿಯ ನಾಯಕ ಪ್ರಫುಲ್ ಪಟೇಲ್ ತಿಳಿಸಿದರು.