ನವದೆಹಲಿ : 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸೋದಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದರು. ಇನ್ನೂ ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಾಗಿ 3ನೇ ಬಾರಿಗೆ ಪ್ರಮಾಣವಚನವನ್ನು ನರೇಂದ್ರ ಮೋದಿ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಸಂಜೆ 7:15 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಆಯ್ಕೆಯಾದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
#WATCH | Narendra Modi set to take oath for the third consecutive term as the Prime Minister pic.twitter.com/M6czTcSE6z
— ANI (@ANI) June 9, 2024