ಬೆಂಗಳೂರು : ಹೊಸ ʻAPL-BPLʼ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ಸದ್ಯಕ್ಕೆ ಯಾವುದೇ ಹೊಸ ರೇಷನ್ ಕಾರ್ಡ್ ವಿಲೇವಾರಿ, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಕ್ಯಾನ್ಸರ್, ಕಿಡ್ನಿ,ಹೃದಯ ಸೇರಿ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸ ಬಿಪಿಎಲ್ ನೀಡಲು ಆಹಾರ ಇಲಾಖೆ ಮುಂದಾಗಿದೆ. ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್ ಗೆ 2.95 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳಲ್ಲಿ ಕ್ಯಾನ್ಸರ್, ಕಿಡ್ನಿ, ಹೃದಯ ಸಮಸ್ಯೆ ಸೇರಿ ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರೂ ಅರ್ಜಿ ಸಲ್ಲಿಸಿದ್ದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್ ಕಾರ್ಡ್ ಪ್ರಮುಖ ದಾಖಲೆಯಾಗಿದ್ದು, ಹೀಗಾಗಿ ಇಂತಹ ಜನರಿಗೆ ಬಿಪಿಎಲ್ ಕಾರ್ಡ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಇವರಿಗೆ ಕಾರ್ಡ್ ವಿತರಣೆಯಾಗಲಿದೆ ಎಂದು ತಿಳಿದುಬಂದಿದೆ.
ಇನ್ನು ರಾಜ್ಯ ಸರ್ಕಾರವು ಬಾಕಿ ಅರ್ಜಿಗಳ ವಿಲೇವಾರಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ, ಹೊಸ ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿ ಮೂರು ವರ್ಷದಿಂದ ಕಾಯುತ್ತಿರುವವರಿಗೆ ಹಾಗೂ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವವರಿಗೆ ಭಾರಿ ನಿರಾಸೆಯಾಗಿದೆ.