ಲಖನೌ : ದೇಶದಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಉತ್ತರ ಪ್ರದೇಶಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ 11 ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಲಖನೌ ನ ಪಾರಾ ಪ್ರದೇಶದಲ್ಲಿ ಮನೆಗೆ ಬೆಂಕಿ ಬೆಂಕಿ ಬಿದ್ದು, ಒಂದೇ ಕುಟುಂಬದ 11 ಮಂದಿ ಸಜೀವ ದಹನವಾಗಿದ್ದಾರೆ.
ಲಕ್ನೋ: ಲಕ್ನೋದ ಪ್ಯಾರಾ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ 11 ಸದಸ್ಯರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಹಜರತ್ಗಂಜ್ನ ಎಸ್ಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ನೋ ಮುಖ್ಯ ಅಗ್ನಿಶಾಮಕ ಅಧಿಕಾರಿ ಮಂಗೇಶ್ ಕುಮಾರ್ ಮಾತನಾಡಿ, ರಾತ್ರಿ 10.30 ರ ಸುಮಾರಿಗೆ ಪ್ಯಾರಾದ ದೇವಪುರ ಪ್ರದೇಶದಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಯಿತು. ಬಳಿಕ ಬೆಂಕಿ ನಂದಿಸುವ ಕೆಲಸ ಮಾಡಲಾಗಿದೆ. ಕೂಡಲೇ ಗಾಯಗೊಂಡವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.