ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದೆ. ಘಟನೆ ಸಂಬಂಧ ಐವರನ್ನು ಪೋಲಿಸರು ಬಂಧಿಸಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣ ಸಂಬಂಧ ಕಿಂಗ್ ಪಿನ್ ಕಿತ್ತೂರಿನ ಡಾ.ಅಬ್ದುಲ್ ಗಫಾರ್ ಲಾಡಖಾನ್, ನೇಗಿನಹಾಳದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಮತ್ತು ಪ್ರವೀಣ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಗೂ ಮುಂಚೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಹೆಣ್ಮುಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಮಕ್ಕಳ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.