ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನ ಸೋಲಿನ ಬೇಸರದಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಿದ್ದಾರೆ.
ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಭೇಟಿಗೆ ಆಗಮಿಸಿದ್ದರು. ಈ ವೇಳೆ ಕಚೇರಿಗೆ ಬಂದ ಸಿಎಂ ಸಿದ್ದರಾಮಯ್ಯ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನೋಡಿ ಸಾರಿ ಕಣಮ್ಮ ಎಂದು ಹೇಳಿದ್ದಾರೆ. ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಮೌನಕ್ಕೆ ಶರಣಾಗಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಬಿಜೆಪಿಯ ಜಗದೀಶ್ ಶೆಟ್ಟರ್ ವಿರುದ್ಧ ಸೋಲನುಭವಿಸಿದ್ದಾರೆ.