ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವಂತ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯ ಪತ್ತೆಯಾಗಿದೆ ಎನ್ನಲಾಗುತ್ತಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ನಿವಾಸಕ್ಕೆ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಬಸನಗುಡಿಯ ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿದ್ದಂತ ಕಂಪ್ಯೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಯ ಹೇಳಿಕೆಯನ್ನು ಅದೇ ಸಿಸ್ಟಂನಲ್ಲಿ ಟೈಪಿಂಗ್ ಮಾಡಿಕೊಂಡು, ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಗಾಗಿ ಅಧಿಕಾರಿಗಳು ಪರಿಗಣಿಸಿದ್ದು, ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವಂತ ಜಾಗ, ಅಶ್ಲೀಲ ವೀಡಿಯೋದಲ್ಲಿರುವ ಜಾಗಗಳ ಬಗ್ಗೆಯೂ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ವೇಳೆಯಲ್ಲಿ ಪರಿಶೀಲನೆ ನಡೆಸಿದರು.
BREAKING : ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ