ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದ್ದು ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿದೆ.
ಎಸ್ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಮದ ವಿಧಿಸಿ ಆದೇಶ ಹೊರಡಿಸಿದ್ದಾರೆ.