ಚಾಮರಾಜನಗರ : ಕಳೆದ ಜೂ.8 ರಂದು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವ್ಯಕ್ತಿಯೊಬ್ಬನಿಂದ ಈ ಕುಟುಂಬದ ಅಪ್ರಾಪ್ತೆಯೊಬ್ಬಳು ಲೈಂಗಿಕ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಳು. ಆದರೆ, ಆ ಕುಟುಂಬ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಅದನ್ನು ನಿರ್ಲಕ್ಷಿಸಿದ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ಅದೇ ಕಾರಣಕ್ಕೆ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಮುಂದಾಗಿದ್ದರು.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕರ್ತವ್ಯ ಲೋಪ ವಹಿಸಿದ ಆರೋಪ ಮೇರೆಗೆ ಕೆಆರ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಪಿ ಪಿ ಸಂತೋಷ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಅಮಾನತು ಶಿಕ್ಷೆ ವಿಧಿಸಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ?
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ನಿವಾಸಿ ಮಹದೇವನಾಯಕ (65) ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ (60), ಲೀಲಾವತಿ (45) ಮತ್ತು ರಿಷಿತಾ (21) ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
K.R.ನಗರ ತಾಲೂಕಿನ ಚೀರನಹಳ್ಳಿಯ ಯುವಕನಿಂದ ಬ್ಲ್ಯಾಕ್ಮೇಲ್ ಮೃತ ಮಹದೇವನಾಯಕ ಮೊಮ್ಮಗಳನ್ನು ಓರ್ವ ಯುವಕ ಪ್ರೀತಿಸುತ್ತಿದ್ದನು. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಆಕೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದನು. ಈ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕುಟಂಬಸ್ಥರು ಮಾನ ಮರ್ಯಾದೆಗೆ ಅಂಜಿ ಮಹದೇಶ್ವರ ದರ್ಶನ ಪಡೆದು ಬಳಿಕ ತಾಳಬೆಟ್ಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.