ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲಿನ ಹಳಿಗಳ ಮೇಲೆ ಯುವಕನೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಘಟನೆಯಲ್ಲಿ ಆತನ ತಲೆಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ರ ಸುಮಾರಿಗೆ ಪುರುಷ ಪ್ರಯಾಣಿಕರೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಚಲ್ಲಘಟ್ಟದಿಂದ ಮೈಸೂರು ರಸ್ತೆಗೆ 8.56 ಗಂಟೆಯಿಂದ ಶಾರ್ಟ್ ಲೂಪ್ ಸೇವೆ ಆರಂಭಿಸಲಾಯಿತು. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ವೈಟ್ ಫೀಲ್ಡ್ ಗೆ (ಕಾಡುಗೋಡಿ) ಎಂದು ತಿಳಿಸಿದೆ.
ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಪ್ರಯಾಣಿಕನ ತಲೆಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಸೇರಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದೆ.
ಈ ಘಟನೆಯಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಕೆಲ ಕಾಲ ಸ್ಥಗಿತಗೊಂಡಿದ್ದು. ಮತ್ತೆ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು ರಾತ್ರಿ 9.30 ರಿಂದ ಸಾಮಾನ್ಯ ಸ್ಥಿತಿಯನ್ನು ಪುನರಾರಂಭಿಸಲಾಯಿತು ಎಂದು ತಿಳಿಸಿದೆ.
BIG NEWS: ‘ಯುವ ರಾಜ್ಕುಮಾರ್’ ಪತ್ನಿ ಶ್ರೀದೇವಿಗೆ ಅಕ್ರಮ ಸಂಬಂಧ ಇತ್ತು: ವಕೀಲ ಪ್ರಸಾದ್ ಗಂಭೀರ ಆರೋಪ
GOOD NEWS : SSLC-2 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ ಕಲ್ಪಿಸಿದ ‘BMTC’