ಬೆಂಗಳೂರು : ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರವಾಗಿ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ಅದರಂತೆ ಸಫಾಯಿ ಕರ್ಮಚಾರಿ, ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ ಕಾರ್ಮಿಕರ ಮಕ್ಕಳು ಶೇ.10, ಬಾಲ ಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು ಶೇ.10, ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು ಶೇ.10, ಗುರುತಿಸಿರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರು ಮಕ್ಕಳು ಶೇ.10 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಶೇ.10 ರಷ್ಟು ಈ ವಿಶೇಷ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಜೂನ್, 15 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಮೀಪದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು.