ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಪೋಲಿಸರು ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ, ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತರಲಾಗಿದೆ.
ಸದ್ಯ ಪ್ರಕರಣ ಸಂಬಂಧ ಬಂಧಿತರ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಲ್ಲಾ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಕೊಲೆಯಾದ ಸ್ವಾಮಿ ಶವವನ್ನು ವಿಕ್ಟೋರಿಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಸೆಯನ್ನು ನಡೆಸಿದ ಬಳಿಕ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎನ್ನಲಾಗಿದೆ.