ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನ ಕೆಲವೇ ಹೊತ್ತಲ್ಲಿ ಬೆಂಗಳೂರಿನ 24ನೆ ACMM ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಈ ಮೊದಲು ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇನ್ನೇನು ಕೆಲವೇ ಹೊತ್ತಲ್ಲಿ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಆರೋಪಿಗಳಿಗೆ ವೈದ್ಯರು ವೈದ್ಯಕೀಯ ತಪಾಸಣೆ ಮಾಡಿ ತೆರಳಿದ್ದಾರೆ. ದರ್ಶನ್, ಪವಿತ್ರ ಗೌಡ ಸೇರಿ 13 ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪೊಲೀಸರು ವೈದ್ಯರನ್ನು ಕರೆಸಿಕೊಂಡಿದ್ದರು. ಈ ವೇಳೆ ಠಾಣೆಗೆ ಬಂದಿದ್ದ ವೈದ್ಯರು ಎಲ್ಲಾ ಆರೋಪಿಗಳ ವೇದಿಕೆ ಪರೀಕ್ಷೆ ಮಾಡಿ ವಾಪಸ್ ತೆರಳಿದ್ದಾರೆ. ಕೆಲವೇ ಹೊತ್ತಲ್ಲಿ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರಿನ 24ನೇ ACMM ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ.
ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.