ದಕ್ಷಿಣಕನ್ನಡ : ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನದಂದು ಮಂಗಳೂರಿನ ಬೋಳಿಯಾರು ನಲ್ಲಿ ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಎಸ್ಪಿ ಅನುಪಮ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ 20 ಜನರನ್ನು ವಶಕ್ಕೆ ಪಡೆದಿದ್ದವು. ಚಾಕು ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದರು.
ಮೆರವಣಿಗೆಯ ಬಳಿಕ ಮಸೀದಿಯ ಮುಂದೆ ಮೂವರು ಘೋಷಣೆ ಕೂಗಿದ್ದಾರೆ. ನಂತರ ಘೋಷಣೆ ಕೂಗಿದ್ದವರ ಮೇಲೆ ಹಲ್ಲೆ ನಡೆದಿದೆ. ಆರೋಪಿಯಲ್ಲಿ ಒಬ್ಬ ರೌಡಿಶೀಟರ್ ಇದ್ದ ಆತ ಚೂರಿ ಇಟ್ಟುಕೊಂಡಿದ್ದ. ಭಾರತ್ ಮಾತಾ ಕೀ ಜಯ್ ಎನ್ನುವ ಮುನ್ನ ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ ಶಾಂತಿ ಸಭೆ ನಡೆಸುತ್ತೇವೆ. ಎಲ್ಲಾ ಧರ್ಮಗಳ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲು ನಾವು ನಿಗಾ ಇರಿಸಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿದರು.