ಬೆಂಗಳೂರು: ಮೋರಿಯಲ್ಲಿ ಸಿಕ್ಕಂತ ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ 15 ಭಾಗಗಳ್ಲಲಿ ಹಲ್ಲೆ ಆಗಿರೋದಾಗಿ ತಿಳಿದು ಬಂದಿದೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ನಟ ದರ್ಶನ್ ಅಂಡ್ ಟೀಂ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನ ಕಿಡ್ನ್ಯಾಪ್ ಮಾಡಿ, ಹಲ್ಲೆ ನಡೆಸಿ, ಭೀಕರವಾಗಿ ಹತ್ಯೆ ಮಾಡಿ, ಮೋರಿಗೆ ಶವವನ್ನು ಬೀಸಾಕಲಾಗಿತ್ತು.
ಈಗ ಪ್ರಕರಣ ಬೆಳಕಿಗೆ ಬಂದ ನಂತ್ರ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಈ ಬೆನ್ನಲ್ಲೇ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ವೈದ್ಯರು ಮಾಹಿತಿ ನೀಡಿರೋದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ದೇಹದ ಮೇಲೆ 15 ಕಡೆಗಳಲ್ಲಿ ಗಾಯದ ಗುರುತು ಪತ್ತೆಯಾಗಿರೋದಾಗಿ ಮರಣೋತ್ತರ ಪರೀಕ್ಷೆ ನಡೆಸಿದಂತ ವೈದ್ಯರು ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಅವರ ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ 15 ಕಡೆಯಲ್ಲಿ ಬಲವಾದ ವಸ್ತುವಿನಿಂದ, ಕಟ್ಟಿಗೆಯಿಂದ ಹಲ್ಲೆ ಮಾಡಿರೋದಾಗಿ ಪೋಸ್ಟ್ ಮಾರ್ಟಂ ಮಾಡಿದಂತ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
BIG UPDATE : ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರ ಬಂಧನ
BREAKING : ಕೆಲವೇ ಹೊತ್ತಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಜನರು ಕೋರ್ಟ್ ಮುಂದೆ ಹಾಜರು