ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ. ಜುಲೈ.31 ಕೊನೆಯ ದಿನವಾಗಿದೆ. ಅದರೊಳೆಗೆ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಜನರ ಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದೆ. ನಗರ ಪಾಲಿಕೆಯು ರಸ್ತೆಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳ ನಿರ್ವಹಣೆ, ಆಸ್ತಿ ಮತ್ತು ಖಾತಾ ಸಂಬಂಧಿತ ಸೇವೆಗಳು, ಘನತ್ಯಾಜ್ಯ ನಿರ್ವಹಣೆ ಮುಂತಾದ ಸೇವೆಗಳ ಸಮರ್ಥ ವಿತರಣೆಯು ಬೆಂಗಳೂರಿಗರಿಗೆ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ನಿರ್ಣಾಯಕವಾಗಿದೆ ಎಂದು ಅರ್ಥಮಾಡಿ ಕೊಂಡಿದೆ ಎಂದಿದ್ದಾರೆ.
ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದೆ. ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರಿಂದ ಸುಮಾರು ರೂ. 1000 ಕೋಟಿಗಳಷ್ಟು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯದಿಂದ, ಒಂದು ಭಾರಿ ಪರಿಹಾರ ಯೋಜನೆಯನ್ನು [OTS] ಪರಿಚಯಿಸಿದೆ, ಇದರ ಅಡಿಯಲ್ಲಿ ಆಸ್ತಿ ತೆರಿಗೆಯ ಬಾಕಿಯ ಮೇಲೆ ಪಾವತಿಸಬೇಕಾದ ಬಡ್ತಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗಿದೆ ಮತ್ತು ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. OTS ನ ಈ ಸುವರ್ಣಾವಕಾಶವು 31ನೇ ಜುಲೈ 2024 ರಂದು ಕೊನೆಗೊಳ್ಳಲಿದೆ. ಜೀವಮಾನದಲ್ಲಿ ಒಮ್ಮೆ ಮಾತ್ರ ಈ ಯೋಜನೆಯ ಅವಕಾಶವಿದ್ದು, ಇದರ ವಿಸ್ತರಣೆ ಇರುವುದಿಲ್ಲ. ಇಲ್ಲಿಯವರೆಗೆ 4 ಲಕ್ಷ ಸುಸ್ತಿ ರರು ಸುಮಾರು 50000 ಜನರು ಮಾತ್ರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ನಿಮ್ಮ ಸ್ವತ್ತಿನ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಲು ಮತ್ತು ಪುಚಲಿತ ಪವೃತ್ತಿಗೆ ಸೇರಲು ನಾನು ಎಲ್ಲರಿಗೂ ಕರೆ ನೀಡಿ ವಿನಂತಿಸಿದ್ದಾರೆ.
ಕರ್ನಾಟಕ ಸರ್ಕಾರವು ಬೆಂಗಳೂರು ನಗರದಲ್ಲಿ (i) ನಾಗರಿಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ (ii) ನಾಗರಿಕ ಸ್ನೇಹಿ ಸಹಾಯ ಅಪ್ಲಿಕೇಶನ್ (iii) ನಮ್ಮ ಲೇಕ್ ಮೊಬೈಲ್ ಅಪ್ಲಿಕೇಶನ್ (iv) ನಮ್ಮ ಪಾರ್ಕ್ ಮೊಬೈಲ್‌ನಂತಹ ನಾಗರಿಕ ಸ್ನೇಹಿ ಮತ್ತು ಹೊಸದಾದ ಉಪಕ್ರಮಗಳನ್ನು ಪರಿಚಯಿಸಿದೆ. ಜವಾಬ್ದಾರಿಯುತ ನಾಗರಿಕರು ಭಾಗವಹಿಸಿ, ಸ್ಪಂದಕ ಆಸ್ತಿತೆರಿಗೆ ಪಾವತಿಗಳ ಮೂಲಕ ಇವೆಲ್ಲವೂ ಸಾಧ್ಯ ಎಂದು ಹೇಳಿದ್ದಾರೆ.
ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, OTS ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿ ಯ ಅನ್ನೋನಿತ ಉಪಕ್ರಮವಾಗಿದೆ ಎಂದಿದ್ದಾರೆ.
ನಾಗರಿಕರು ಆನ್‌ಲೈನ್ ಮೂಲಕ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಲು ಲಿಂಕ್ https://bbmptax.karnataka.gov.in ಅನ್ನು ಬಳಸಬಹುದು. ಆನ್‌ಲೈನ್ ಪೋರ್ಟಲ್‌ನಲ್ಲಿ OTS ಪ್ರಕಾರ ಆಸ್ತಿ ತೆರಿಗೆ ಬಾಕಿಗಳನ್ನು ಈಗಾಗಲೇ ಕಡಿಮೆ ಮಾಡಲಾಗಿದೆ ಮತ್ತು 1ನೇ ಆಗಸ್ಟ್ 2024 ರಿಂದ ಹೆಚ್ಚಾಗಲಿದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ತಿಳಿಸಿದ್ದಾರೆ.
ಯಾವುದೇ ಸೃಷ್ಟಿಕರಣಗಳು ಅಥವಾ ಮಾಹಿತಿಯ ಅಗತ್ಯವಿದ್ದಲ್ಲಿ, ದಯವಿಟ್ಟು ನಮ್ಮ ಸಹಾಯ ಸಹಾಯವಾಣಿ 1533 ಗೆ ಕರೆ ಮಾಡಲು ಹಿಂಜರಿಯಬೇಡಿ ಅಥವಾ ನಮ್ಮ ಸ್ಥಳೀಯ ಅಸಿಸ್ಟಂಟ್ ರೆವೆನ್ಯೂ ಆಫೀಸರ್ (ARO) ಕಚೇರಿಗಳನ್ನು ಸಂಪರ್ಕಿಸಿ ಎಂದು ಮಾಹಿತಿ ನೀಡಿದ್ದಾರೆ.
ನಮ್ಮ ಪ್ರೀತಿಯ ನಗರದ ಅಭಿವೃದ್ಧಿಗಾಗಿ ಬಿಬಿಎಂಪಿ ಮತ್ತು ನಾಗರಿಕರು ತಮ್ಮ ಜವಾಬ್ದಾರಿಗಳನ್ನು ಪೂರೈಸುವುದರೊಂದಿಗೆ ನಾವು ಕೈ ಜೋಡಿಸಿ ಮತ್ತು ಕುಟುಂಬವಾಗಿ ಒಟ್ಟಾಗಿ ಕೆಲಸ ಮಾಡೋಣ ಅಂತ ಹೇಳಿದ್ದಾರೆ.
ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!