ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾದ ಬಳಿಕ ನಟ ದರ್ಶನ್ ಅವರು ಪವಿತ್ರಾಗೌಡ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಬೆನ್ನಲ್ಲೇ ಕೋಪಗೊಂಡಿದ್ದ ನಟ ದರ್ಶನ್ ಅವರು, ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾದ ಪವಿತ್ರಾಗೌಡ ಆರ್.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎನ್ನಲಾಗಿದೆ.
ನಟಿ ಪವಿತ್ರ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.