ನವದೆಹಲಿ: ಮೋದಿ 3.0 ಸಚಿವ ಸಂಪುಟ ಸೇರಿದ್ದಂತ ಹೆಚ್.ಡಿ ಕುಮಾರಸ್ವಾಮಿಯವರು ತಾವು ಬೃಹತ್ ಕೈಗಾರಿಕಾ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರೋದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಚಿವಾಲಯದ ಅಧಿಕಾರಿಗಳ ಜತೆ ಸಭೆ ನಡೆಸಲಾಯಿತು ಅಂತ ಮಾಹಿತಿ ಹಂಚಿಕೊಂಡಿದ್ದಾರೆ.
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ @MHI_GoI ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು.
ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ… pic.twitter.com/aovyGyqIXH
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 11, 2024
BREAKING: ಐತಿಹಾಸಿಕ ಫೆಡರಲ್ ಗನ್ ವಿಚಾರಣೆಯಲ್ಲಿ ‘ಹಂಟರ್ ಬಿಡೆನ್’ ಎಲ್ಲಾ 3 ಆರೋಪಗಳಲ್ಲಿ ದೋಷಿ | Hunter Biden
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ