ಹೈದರಾಬಾದ್ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಚಿರಂಜೀವಿ, ರಾಮ್ ಚರಣ್, ರಜನಿಕಾಂತ್, ಮೋಹನ್ ಬಾಬು, ಅಲ್ಲು ಅರ್ಜುನ್ ಮುಂತಾದವರು ಭಾಗಿಯಾಗಿದ್ದರು.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಸಮಾರಂಭ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್ಡಿಎಯ ಉನ್ನತ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
N Chandrababu Naidu takes oath as the Chief Minister of Andhra Pradesh. pic.twitter.com/8FmZz0m6Lp
— ANI (@ANI) June 12, 2024
#WATCH | Prime Minister Narendra Modi attends the swearing-in ceremony of TDP chief & Andhra Pradesh CM-designate N Chandrababu Naidu, in Vijayawada. pic.twitter.com/46jaEAqFbr
— ANI (@ANI) June 12, 2024