ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು ಹಲವು ತಿಂಗಳು ಆದರೂ ನಮಗೆ ನ್ಯಾಯ ಸಿಕ್ಕಿಲ್ಲ ಹೀಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಸಹೋದರ ಮನವಿ ಮಾಡಿದ್ದಾರೆ.