ಬೆಂಗಳೂರು: ನಟಿ ಹರ್ಷಿಕಾ ಪೊಣಚ್ಚ ಹಾಗೂ ಭುವನ್ ಅವರ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಹಲ್ಲೆ ನಡೆಸಿದ್ದರ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ನಟಿ ಹರ್ಷಿಕಾ ಪೊಣಚ್ಚ, ಭುನವ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಅಂದಹಾಗೇ ಬೆಂಗಳೂರಿನ ಫ್ರೆಜರ್ ಟೌನ್ ಪ್ರದೇಶದ ಪುಲಕೇಶಿ ನಗರದ ಮಸೀದಿ ರಸ್ತೆಯಲ್ಲಿ ಕಾರು ತಡೆದಿದ್ದಂತ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು. ಈ ಸಂಬಂಧ ಫರ್ವೇಜ್ ಆಲಿ ಫಹೀಮ್, ಶಾಬಾಜ್ ಖಾನ್, ದನೀಶ್ ಆಲಿ ಫರ್ವೇಜ್ ಸೇರಿದಂತೆ ನಾಲ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ