ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A2 ಆರೋಪಿಯಾಗಿರುವ ನಟ ದರ್ಶನವರನ್ನು ಸ್ಥಳ ಮಹಜರುಗಾಗಿ ಪೊಲೀಸರು ಆರ್ ಆರ್ ನಗರದ ಪಟ್ಟಣಗೆರೆ ಶೆಡ್ಡಿಗೆ ಕರೆದು ತಂದಿದ್ದಾರೆ.
ರೇಣುಕಾ ಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಪಟ್ಟಣಗೆರೆ ಇದೀಗ ಪೊಲೀಸರು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ಶೆಡ್ನಲ್ಲಿ ದರ್ಶನ್ ಕರೆ ತಂದು ಸ್ಥಳ ಮಹಜರು ನಡೆಸಲಿದ್ದಾರೆ. ಈಗಾಗಲೇ ದರ್ಶನ್ ಅವರನ್ನು ಹೊರತುಪಡಿಸಿ ಅದಕ್ಕೂ ಮುನ್ನ ಪ್ರಕರಣದ ಎಲ್ಲಾ ಆರೋಪಿಗಳನ್ನು ಕರೆ ತಂದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಬಂದಿದ್ದು ಸ್ಥಳ ಮಹಜರು ನಡೆಸಲಿದ್ದಾರೆ.