ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 13 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ ಎನ್ನಲಾಗಿತ್ತು. ಆದ್ರೇ 13 ಮಂದಿ ಅಲ್ಲ. ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಿನ್ನೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ಪಡೆದು, ಸ್ಥಳ ಮಹಜರು ನಡೆಸುತ್ತಿದ್ದಾರೆ. ಆದ್ರೇ ಈ ಪ್ರಕರಣದಲ್ಲಿ 13 ಮಂದಿಯಲ್ಲಿ 17 ಆರೋಪಿಗಳು ಭಾಗಿಯಾಗಿರೋದಾಗಿ ಪೊಲೀಸರ ಎಫ್ಐಆರ್ ನಿಂದ ತಿಳಿದು ಬಂದಿದೆ.
ಕಾಮಾಕ್ಷಿ ಠಾಣೆಯ ಪೊಲೀಸರು ದಾಖಲಿಸಿರುವಂತ ಎಫ್ಐಆರ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ರೇ, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇನ್ನೂ ಪವನ್ ಎ3, ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಆಲಿಯಾಸ್ ಜಗ್ಗು ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜು ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್ 14, ಕಾರ್ತಿಕ್ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್ ಎ17 ಎಂಬುದಾಗಿ ಉಲ್ಲೇಖಿಸಲಾಗಿದೆ.
ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ
KPCL ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ: KEAಯಿಂದ ಅಂತಿಮ ‘ಅಂಕಪಟ್ಟಿ’ ಪ್ರಕಟ