ಕುವೈತ್: ಕುವೈತ್ನ ಮಂಗಾಫ್ ನಗರದ ಕಾರ್ಮಿಕರಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿಯಿಂದಾಗಿ ಸುಮಾರು 43 ಜನರನ್ನು .
ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ.
“ಕುವೈತ್ ನಗರದಲ್ಲಿ ಸಂಭವಿಸಿದ ಅಗ್ನಿ ದುರಂತದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ” ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
“ದುರಂತವಾಗಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ನಮ್ಮ ರಾಯಭಾರ ಕಚೇರಿ ಸಂಬಂಧಪಟ್ಟ ಎಲ್ಲರಿಗೂ ಸಂಪೂರ್ಣ ಸಹಾಯವನ್ನು ನೀಡುತ್ತದೆ” ಎಂದು ಅವರು ಹೇಳಿದರು.