ನವದೆಹಲಿ: ಮೋದಿ 3.0 ಸಂಪುಟ ಸೇರಿರುವಂತ ಹೆಚ್.ಡಿ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಖಾತೆ ಹಂಚಿಕೆ ಮಾಡಲಾಗಿತ್ತು. ನಿನ್ನೆ ಅಧಿಕಾರ ಸ್ವೀಕರಿಸಿ, ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ, ಕರ್ನಾಟಕದ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಅದು ಏನು ಅಂತ ಮುಂದೆ ಓದಿ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ.
ಮುಂದುವರೆದು ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು ಎಂಬುದಾಗಿ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು ಅಂತ ತಿಳಿಸಿದ್ದಾರೆ.
ಕೇಂದ್ರದ @SteelMinIndia ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ.
Signed the first file after assuming office as Union Minister of Steel. It is related to my home state Karnataka.
The first file of KIOCL Limited was… pic.twitter.com/woDnba7mgI
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 12, 2024
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
BREAKING: ಒಡಿಶಾದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ | Mohan Charan Majhi takes oath