ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ಉಚಿತ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿರುವ ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ.
ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.