ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಈ ಒಂದು ಕೃತ್ಯದಲ್ಲಿ ಈಗಾಗಲೇ ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 13 ಆರೋಪಿಗಳು ಜೈಲು ಪಾಲಾಗಿದ್ದಾರೆ ಇದರ ಬೆನ್ನಲ್ಲೇ ಇದೀಗ ಈ ಒಂದು ಪ್ರಕರಣದಲ್ಲಿ ಪೊಲೀಸರು ಶಮಿಲಾಗಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಹೌದು ರೇಣುಕಾಸ್ವಾಮಿ ಕೊಲೆ ನಂತರ ಆರೋಪಿಗಳು ಪಿಎಸ್ಐಯೊಬ್ಬರಿಗೆ ಕರೆ ಮಾಡಿದ್ದರು. ಆಗ, ನಮ್ಮ ಠಾಣಾ ವ್ಯಾಪ್ತಿಯಲ್ಲಿ ಹೆಣ ಹಾಕಬೇಡಿ ಎಂದು ಪಿಎಸ್ಐ ಹೇಳಿದ್ದರು ಎನ್ನಲಾಗಿದೆ. ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಹೊಡೆದು ಕೊಲೆ ಮಾಡಿದ ಆರೋಪ ದರ್ಶನ್ ಗ್ಯಾಂಗ್ ಮೇಲಿದೆ. ಈ ಪ್ರದೇಶದ ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿದೆ. ಪಿಎಸ್ಐ ಬಳಿ ಚರ್ಚಿಸಿದ ನಂತರವೇ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಶವ ಕೊಂಡೊಯ್ದು ಎಸೆದಿದ್ದರು.
ಅಲ್ಲದೆ, ದರ್ಶನ್ ಮತ್ತು 13ನೇ ಆರೋಪಿ ದೀಪಕ್ನನ್ನು ಪ್ರಕರಣದಿಂದ ಬಚಾವ್ ಮಾಡಲು 5 ಕೋಟಿ ರೂಪಾಯಿಗೆ ಡೀಲ್ ನಡೆಸಲು ಮುಂದಾಗಿದ್ದರು ಎಂಬ ಆರೋಪ ಇದೀಗ ಕೇಳಿ ಬಂದಿದೆ. ಇಷ್ಟೇ ಅಲ್ಲದೆ, ಪಿಎಸ್ಐಯೊಬ್ಬರ ಸೂಚನೆ ಮೇರೆಗೆ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಕೊಂಡೊಯ್ದು ಅಲ್ಲಿ ಎಸೆಯಲಾಗಿತ್ತು ಎನ್ನಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಮಾಡಿದ ನಂತರ ಆರೋಪಿಗಳನ್ನು ಬಚಾವ್ ಮಾಡಲು ಪೊಲೀಸರ ತೆಲುಗು ಡಿಲೀಟ್ ಮಾಡಿಕೊಂಡಿದ್ದರು ಎಂಬ ಸ್ಫೋಟಕ ಮಾಹಿತಿ ಕೂಡ ಬಹಿರಂಗವಾಗಿದೆ.ದರ್ಶನ್ ಹೆಸರು ಬರುವುದನ್ನು ತಪ್ಪಿಸಲು ಡೀಲ್ಗೆ ಮುಂದಾಗಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಜೊತೆಗೆ, 13ನೇ ಆರೋಪಿ ದೀಪಕ್ ಪ್ರಭಾವಿ ರಾಜಕಾರಣಿ ಸಂಬಂಧಿಯಾಗಿದ್ದಾನೆ.ಆತನನ್ನೂ ಈತನನ್ನೂ ಕೊಲೆ ಕೇಸ್ನಿಂದ ಹೊರಗಿಡಲು ಪ್ರಯತ್ನ ನಡೆದಿತ್ತೇ ಎಂಬ ಶಕೆಯೂ ಈಗ ವ್ಯಕ್ತವಾಗಿದೆ.